ಎನ್‌ಕೌಂಟರ್‌ನಲ್ಲಿ ನಕ್ಸಲರ ಹತ್ಯೆ ( ಸಾಂಕೇತಿಕ ಚಿತ್ರ)
ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಮೃತಪಟ್ಟಿದ್ದಾರೆ.
‘ಅಬುಜಾಮಡ್ ಪ್ರದೇಶದ ಅರಣ್ಯದಲ್ಲಿ ನಕ್ಸಲರು ಸಕ್ರಿಯರಾಗಿರುವ ಬಗ್ಗೆ ದೊರೆತ ಮಾಹಿತಿಯ ಆಧಾರದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.
‘ಹತರಾದ ನಕ್ಸಲರ ಶವ, ಎಕೆ 47, ಎಸ್‌ಎಲ್ಆರ್ ರೈಫಲ್, ಇತರ ಶಸ್ತ್ರಾಸ್ತ್ರ, ಸ್ಫೋಟಕಗಳು ಮತ್ತು ದಿನನಿತ್ಯ ಬಳಕೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.