ADVERTISEMENT

ನಿಂತಿದ್ದ ಲಾರಿಗೆ ವ್ಯಾನ್ ಡಿಕ್ಕಿ– ಮಗು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

ಪಿಟಿಐ
Published 6 ಸೆಪ್ಟೆಂಬರ್ 2023, 10:06 IST
Last Updated 6 ಸೆಪ್ಟೆಂಬರ್ 2023, 10:06 IST
   

ಸೇಲಂ: ರಸ್ತೆಬದಿಯಲ್ಲಿ ನಿಂತಿದ್ದ ಲಾರಿಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಒಂದು ವರ್ಷದ ಮಗು ಸೇರಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.

ಶಂಖಗಿರಿ ಎಂಬಲ್ಲಿ ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, ಚಾಲಕ ಸೇರಿ ವಾಹನದಲ್ಲಿ ಎಂಟು ಮಂದಿ ಕೊಂಡಾಲಂಪಟ್ಟಿಯಿಂದ ಈರೋಡ್ ಜಿಲ್ಲೆಗೆ ಪ್ರಯಾಣಿಸುತ್ತಿದ್ದರು ಎಂದು ವರದಿ ತಿಳಿಸಿದೆ.

ನಿಂತಿದ್ದ ಲಾರಿಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಒಂದು ವರ್ಷದ ಮಗು, ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಮಹಿಳೆ ಮತ್ತು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ಚಾಲಕನು ಮಾತನಾಡಲು ಸಾಧ್ಯವಾಗದ ಸ್ಥಿತಿಯಲ್ಲಿದ್ದು, ಚೇತರಿಕೆ ಬಳಿಕ ಅಪಘಾತದ ಸ್ಪಷ್ಟ ಕಾರಣ ತಿಳಿದುಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.