ADVERTISEMENT

ಕಾಶ್ಮೀರ ಎನ್‌ಕೌಂಟರ್: ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿ 6 ಭಯೋತ್ಪಾದಕರ ಹತ್ಯೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2021, 6:29 IST
Last Updated 30 ಡಿಸೆಂಬರ್ 2021, 6:29 IST
ಐಎಎನ್‌ಎಸ್ ಚಿತ್ರ
ಐಎಎನ್‌ಎಸ್ ಚಿತ್ರ   

ಶ್ರೀನಗರ: ಜಮ್ಮು ಮತ್ತುಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಆರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದ್ದು, ಅದರಲ್ಲಿಇಬ್ಬರು ಪಾಕಿಸ್ತಾನಿ ಪ್ರಜೆಗಳುಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಎಲ್ಲಾ ಆರು ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

‘ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯ ಆರು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ನಾಲ್ವರ ಗುರುತು ಪತ್ತೆಮಾಡಲಾಗಿದ್ದು,ಇನ್ನಿಬ್ಬರು ಭಯೋತ್ಪಾದಕರ ಗುರುತು ಪತ್ತೆ ಮಾಡಲಾಗುತ್ತಿದೆ. ಇದು ನಮಗೆ ಸಿಕ್ಕ ದೊಡ್ಡ ಯಶಸ್ಸು’ ಎಂದು ಜಮ್ಮು ಮತ್ತು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ADVERTISEMENT

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶಹಾಬಾದ್ ದೂರು ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದು, ಒಬ್ಬ ಪೊಲೀಸ್ ಗಾಯಗೊಂಡಿದ್ದಾರೆ.

ಇತರ ಮೂವರು ಜೆಇಎಂ ಭಯೋತ್ಪಾದಕರನ್ನು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.