ADVERTISEMENT

ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಕಣ್ಣುಗಳಿಗೆ ಗಾಯ ಮಾಡಿ ತಪ್ಪಿಸಿಕೊಂಡ ಆರೋಪಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2020, 13:27 IST
Last Updated 23 ಏಪ್ರಿಲ್ 2020, 13:27 IST
   

ಭೋಪಾಲ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ, ಆಕೆಯ ಕಣ್ಣುಗಳಿಗೆ ತೀವ್ರ ಹಾನಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ತಪ್ಪಿಸಿಕೊಂಡಿರುವ ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ಅಪ್ರಾಪ್ತ ವಯಸ್ಕ ಬಾಲಕಿಯು ತನ್ನ ಮನೆಯ ಎದುರು ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಯು ಅವಳನ್ನು ಕೊರೆದೊಯ್ದು ಲೈಂಗಿಕ ಶೋಷಣೆ ನಡೆಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

'ತನ್ನ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ನಂತರ ಅವಳ ಕಣ್ಣಗಳಿಗೆ ಗಂಭೀರ ಸ್ವರೂಪದ ಗಾಯ ಮಾಡಿದ್ದಾನೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಚೌಹಾನ್ ಸ್ಪಷ್ಟಪಡಿಸಿದ್ದಾರೆ.

ಸಂತ್ರಸ್ತೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.