
ಪಿಟಿಐ
ನವದೆಹಲಿ: ನರೇಗಾಕ್ಕೆ ಮರುನಾಮಕರಣ ಮಾಡಿ ಹೊಸ ಕಾಯ್ದೆ ರೂಪಿಸಿರುವುದನ್ನು ಖಂಡಿಸಿ ಜನವರಿ 16ರಂದು ‘ಅಖಿಲ ಭಾರತ ಪ್ರತಿರೊಧ ದಿನ’ ಹೆಸರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೋಮವಾರ ಘೋಷಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಕೆಎಂ ನಾಯಕರು, ‘ವಿಬಿ–ಜಿ ರಾಮ್ ಜಿ’ ಕಾಯ್ದೆಯನ್ನು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಮುಂದಿನ ನಡೆಯ ಬಗ್ಗೆ ನಿರ್ಧರಿಸಲು ಜನವರಿ 11ರಂದು ದೆಹಲಿಯಲ್ಲಿ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.