ADVERTISEMENT

ಮುಂಗಾರು: ಜೂನ್‌ 4ಕ್ಕೆ ಕೇರಳ ಪ್ರವೇಶ ಸಾಧ್ಯತೆ

ಪಿಟಿಐ
Published 17 ಮೇ 2023, 3:15 IST
Last Updated 17 ಮೇ 2023, 3:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ನವದೆಹಲಿ (ಪಿಟಿಐ): ಈ ಬಾರಿ ನೈರುತ್ಯ ಮುಂಗಾರು ಮಾರುತವು ಕೇರಳವನ್ನು ಜೂನ್ 4ರಂದು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಹೇಳಿದೆ.

ವಾಡಿಕೆಯಂತೆ ಮುಂಗಾರು ಜೂನ್‌ 1ರಂದು ಕೇರಳ ಕರಾವಳಿಯನ್ನು ಪ್ರವೇಶಿಸಬೇಕು. ಈ ವರ್ಷ ಜೂನ್ 4ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ. ಮುಂಗಾರು ಪ್ರವೇಶವು ನಾಲ್ಕು ದಿನಗಳಷ್ಟು ಮುಂಚಿತವಾಗಿ ಅಥವಾ ವಿಳಂಬವಾಗಿ ಆಗುವ ಸಾಧ್ಯತೆಯೂ ಇದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಮುಂಗಾರು ಮಾರುತವು ಕೇರಳ ಪ್ರವೇಶಿಸಿ, ನಂತರ ದೇಶದ ಇತರ ಭಾಗಗಳನ್ನು ಆವರಿಸಿಕೊಳ್ಳುತ್ತದೆ.  

ADVERTISEMENT

‘ಎಲ್‌ ನಿನೊ’ ಪರಿಸ್ಥಿತಿಯ ಹೊರತಾಗಿಯೂ ಈ ಬಾರಿ ಮುಂಗಾರು ಅವಧಿಯಲ್ಲಿ ವಾಡಿಕೆಯಂತೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆಯು ಕಳೆದ ತಿಂಗಳು ಹೇಳಿತ್ತು.

ದೇಶದ ಕೃಷಿ ವಲಯದಲ್ಲಿ ಶೇ 52ರಷ್ಟು ಪ್ರದೇಶವು ಮಳೆಯನ್ನೇ ಅವಲಂಬಿಸಿದೆ. ದೇಶದ ಒಟ್ಟು ಆಹಾರ ಧಾನ್ಯ ಉತ್ಪಾದನೆಯಲ್ಲಿ ಈ ಮಳೆ ಆಶ್ರಿತ ಪ್ರದೇಶದ ಪಾಲು ಶೇ 40ರಷ್ಟು ಎಂಬುದು ಗಮನಾರ್ಹ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.