ADVERTISEMENT

ಕೇರಳಕ್ಕೆ ಜೂ.4ರಂದು ಮುಂಗಾರು ಪ್ರವೇಶ ಸಾಧ್ಯತೆ: ಹವಾಮಾನ ಇಲಾಖೆ

ಪಿಟಿಐ
Published 16 ಮೇ 2023, 11:05 IST
Last Updated 16 ಮೇ 2023, 11:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೇರಳಕ್ಕೆ ಮುಂಗಾರು ಮಳೆ ಜೂನ್ 4ರಂದು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ವಾಡಿಕೆಯಂತೆ ಕೇರಳಕ್ಕೆ ಜೂನ್ 1ರಂದು ಮುಂಗಾರು ಮಳೆ ಕಾಲಿಡುತ್ತದೆ. ಇದು ಒಂದು ವಾರ ಏರುಪೇರಾಗುವ ಸಾಧ್ಯತೆಯೂ ಇದೆ.

ಈ ವರ್ಷ ಕೇರಳಕ್ಕ ನೈಋತ್ಯ ಮುಂಗಾರು ಆಗಮನ ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ನಾಲ್ಕು ದಿನ ತಡವಾಗಿ ಕೇರಳದಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

ADVERTISEMENT

ಕಳೆದ ವರ್ಷ ಮುಂಗಾರು ಮಳೆ ಮೇ 29ರಂದು ಪ್ರವೇಶಿಸಿತ್ತು. 2021ರಲ್ಲಿ ಜೂನ್ 3 ಮತ್ತು 2020ರಲ್ಲಿ ಜೂನ್ 1ರಂದು ಮಾನ್ಸೂನ್ ಕಾಲಿಟ್ಟಿತ್ತು.

ನೈಋತ್ಯ ಮುಂಗಾರು ಅವಧಿಯಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಳೆದ ತಿಂಗಳು ತಿಳಿಸಿತ್ತು.

ಮುಂಗಾರು ಮಾರುತದಿಂದ ಮಳೆ ಬೀಳುತ್ತಿದ್ದಂತೆ ರೈತರು ಬೆಳೆಗಳನ್ನು ಬಿತ್ತನೆ ಮಾಡಲು ಪ್ರಾರಂಭಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.