ನವದೆಹಲಿ: ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಅಲ್ಪ ಏರಿಕೆಯಾಗಿದ್ದು ಕಳೆದ 24 ಗಂಟೆಗಳಲ್ಲಿ 1080 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ 796 ಪ್ರಕರಣಗಳು ವರದಿಯಾಗಿದ್ದವು.
ಒಂದೇ ದಿನ 19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.ಇದರೊಂದಿಗೆ ಸೋಂಕಿತರ ಸಂಖ್ಯೆ 4,30,39,008ಕ್ಕೆ ಏರಿಕೆಯಾಗಿದೆ. ಆ ಪೈಕಿ 5,21,736 ಮಂದಿ ಸಾವಿಗೀಡಾಗಿದ್ದಾರೆ. ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸದ್ಯ ದೇಶದಲ್ಲಿ 10,870 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 0.20 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.