ADVERTISEMENT

ಸ್ಮಾರ್ಟ್‌ ಕನ್ನಡಕ ಧರಿಸಿ ಪದ್ಮನಾಭಸ್ವಾಮಿ ದೇವಾಲಯ ಪ್ರವೇಶಕ್ಕೆ ಯತ್ನ: ವಶಕ್ಕೆ

ಪಿಟಿಐ
Published 7 ಜುಲೈ 2025, 15:41 IST
Last Updated 7 ಜುಲೈ 2025, 15:41 IST
ಶ್ರೀ ಅನಂತಪದ್ಮನಾಭಸ್ವಾಮಿ ದೇವಾಲಯ – ಪಿಟಿಐ ಚಿತ್ರ
ಶ್ರೀ ಅನಂತಪದ್ಮನಾಭಸ್ವಾಮಿ ದೇವಾಲಯ – ಪಿಟಿಐ ಚಿತ್ರ   

ತಿರುವನಂತಪುರ: ಸ್ಮಾರ್ಟ್‌ ಕನ್ನಡಕ ಧರಿಸಿ ಶ್ರೀ ಪದ್ಮನಾಭಸ್ವಾಮಿ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ ಗುಜರಾತ್ ಮೂಲದ ವ್ಯಕ್ತಿಯನ್ನು ಇಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೇವಾಲಯದಲ್ಲಿ ಕ್ಯಾಮೆರಾ ಹೊಂದಿದ ಕನ್ನಡಕದಂತಹ ಸಾಧನಗಳನ್ನು ನಿಷೇಧಿಸಲಾಗಿದೆ.

ಅರೋಪಿ ಸುರೇಂದ್ರ ಶಾ (66) ಅವರನ್ನು ಭಾನುವಾರ ಸಂಜೆ ದೇವಾಲಯದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದರು. ‘ಮುಖ್ಯದ್ವಾರದ ಮೂಲಕ ಪ್ರವೇಶಿಸಿದ್ದ ಆರೋಪಿಯನ್ನು ಸಂಶಯಗೊಂಡ ಭದ್ರತಾ ಸಿಬ್ಬಂದಿ ತಪಾಸನೆ ನಡೆಸಿದ್ದರು. ಈ ವೇಳೆ ಅವರ ಕನ್ನಡಕದಲ್ಲಿ ರಹಸ್ಯ ಕ್ಯಾಮೆರಾ ಇರುವುದು ಪತ್ತೆಯಾಗಿತ್ತು’ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

‘ನಂತರ ಅವರನ್ನು ದೇವಾಲಯದಿಂದ ಹೊರಗೆ ಕರೆದೊಯ್ಯಲಾಯಿತು ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯಾವುದೇ ದುರುದ್ದೇಶ ಶಂಕಿಸಲಾಗಿಲ್ಲವಾದರೂ, ವಿವರವಾದ ತನಿಖೆ ನಡೆಯುತ್ತಿದೆ. ವಿಚಾರಣೆಗೆ ಹಾಜರಾಗುವಂತೆ ಆರೋಪಿಗೆ ನೋಟಿಸ್ ನೀಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.