ನವದೆಹಲಿ: ಲೋಕಸಭೆಗೆ ಮೊದಲ ಬಾರಿ ಆಯ್ಕೆಯಾಗಿರುವ ಸ್ಮೃತಿ ಇರಾನಿ, ಅಮಿತ್ ಶಾ ಹಾಗೂ ರವಿಶಂಕರ್ ಪ್ರಸಾದ್ ಅವರಿಗೆ ಮೊದಲ ಸಾಲಿನ ಆಸನ ಸಿಕ್ಕಿವೆ.
ಈ ಹಿಂದೆ ರಾಜ್ಯಸಭೆ ಸದಸ್ಯರಾಗಿದ್ದ ಸ್ಮೃತಿ ಇರಾನಿ ಅವರಿಗೆ ಲೋಕಸಭೆಯಲ್ಲಿ ಮೊದಲ ಬಾರಿಗೆ ಮುಂದಿನ ಸಾಲು ದೊರೆತಿದೆ. ಶಾ ಹಾಗೂ ರವಿಶಂಕರ್ ಪ್ರಸಾದ್ ಅವರು ರಾಜ್ಯಸಭೆಯಲ್ಲಿ ಮೊದಲ ಸಾಲಿನಲ್ಲಿ ಕುಳಿತುಕೊಳ್ಳುತ್ತಿದ್ದರು.
ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸದಾನಂದಗೌಡ, ನರೇಂದ್ರ ಸಿಂಗ್ ತೋಮರ್, ಅರ್ಜುನ್ ಮುಂಡಾ, ಅರವಿಂದ್ ಸಾವಂತ್ ಅವರೂ ಮೊದಲ ಸಾಲಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.