ADVERTISEMENT

ರಾಷ್ಟ್ರಪತಿ ಮುರ್ಮು ಭೇಟಿಯಾದ ಸ್ಮೃತಿ ಇರಾನಿ

ಪಿಟಿಐ
Published 29 ಜುಲೈ 2022, 12:48 IST
Last Updated 29 ಜುಲೈ 2022, 12:48 IST
ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ರಾಜ್ಯ ಖಾತೆ ಸಚಿವರಾದ ಮಹೇಂದ್ರ ಮುಂಜಾಪಾರ ಮತ್ತು ಜಾನ್‌ ಬರ್ಲಾ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.
ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ರಾಜ್ಯ ಖಾತೆ ಸಚಿವರಾದ ಮಹೇಂದ್ರ ಮುಂಜಾಪಾರ ಮತ್ತು ಜಾನ್‌ ಬರ್ಲಾ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.   

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನುಶುಕ್ರವಾರ ರಾಷ್ಟ್ರಪತಿಭವನದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

‘ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನುರಾಜ್ಯ ಖಾತೆ ಸಚಿವರೊಂದಿಗೆ ಭೇಟಿ ಮಾಡುವ ಅವಕಾಶ ಲಭಿಸಿರುವುದು ನನ್ನ ಭಾಗ್ಯ’ ಎಂದು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ಹಿರಿಯ ನಾಯಕ ಅಧೀರ್‌ ರಂಜನ್‌ ಚೌಧರಿ ಅವರ ’ರಾಷ್ಟ್ರಪತ್ನಿ’ ಹೇಳಿಕೆ ವಿವಾದದ ಮರು ದಿನವೇ ಸ್ಮೃತಿ ಅವರು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.