ADVERTISEMENT

ಉತ್ತರ ಪ್ರದೇಶ ಚುನಾವಣೆಗೂ ಮುನ್ನವೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸ್ಮೃತಿ ಇರಾನಿ

ಪಿಟಿಐ
Published 31 ಜನವರಿ 2022, 1:16 IST
Last Updated 31 ಜನವರಿ 2022, 1:16 IST
ಸ್ಮೃತಿ ಇರಾನಿ (ಪಿಟಿಐ ಸಂಗ್ರಹ ಚಿತ್ರ)
ಸ್ಮೃತಿ ಇರಾನಿ (ಪಿಟಿಐ ಸಂಗ್ರಹ ಚಿತ್ರ)   

ಆಗ್ರಾ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಗೂ ಮುನ್ನವೇ ಕಾಣೆಯಾಗಿದ್ದು, ಸೋಲೊಪ್ಪಿಕೊಂಡಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವ್ಯಂಗ್ಯವಾಡಿದ್ದಾರೆ.

ಸ್ಮೃತಿ ಇರಾನಿ ಅವರು ಭಾನುವಾರ ಆಗ್ರಾದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮನೆ–ಮನೆ ಪ್ರಚಾರಾಭಿಯಾನ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ‘ಲಡ್‌ಕೀ ಹೂ, ಲಡ್ ಸಕ್‌ತೀ ಹೂ’ ಅಭಿಯಾನವನ್ನು ಉಲ್ಲೇಖಿಸಿದ ಸ್ಮೃತಿ ಇರಾನಿ, ‘ಹೋರಾಡಲು ಸಾಧ್ಯವಾಗದ ಒಬ್ಬ ಹುಡುಗ ಮನೆಯೊಳಗೆ ಕುಳಿತಿದ್ದಾನೆ’ ಎಂಬುದನ್ನು ಪ್ರಿಯಾಂಕಾ ಅವರ ಅಭಿಯಾನ ಸೂಚಿಸುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ADVERTISEMENT

ಜನರ ಬೆಂಬಲ ಇರುವ ಕಾರಣ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಬಿಜೆಪಿಗೆ ದೊರೆಯುತ್ತಿರುವ ಜನಬೆಂಬಲ ನೋಡಿ ಎಸ್‌ಪಿ, ಕಾಂಗ್ರೆಸ್ ಹಾಗೂ ಬಿಎಸ್‌ಪಿ ಆಕ್ರೋಶ ವ್ಯಕ್ತಪಡಿಸುತ್ತಿವೆ ಎಂದು ಇರಾನಿ ಹೇಳಿದ್ದಾರೆ.

ಎಸ್‌ಪಿ ಆಶ್ರಯ ನೀಡಿರುವ ಕೆಲವು ಕ್ರಿಮಿನಲ್‌ಗಳು ಕೆಲವು ಕ್ಷೇತ್ರಗಳಲ್ಲಿ ಜನರು, ಪಕ್ಷದ ಕಾರ್ಯಕರ್ತರು ಮತ್ತು ಸಮಾಜಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಅವರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.