
ಪಿಟಿಐ
ಹಾವು
ಮೇದಿನಿನಗರ: ವನ್ಯಜೀವಿ ಅಪರಾಧ ನಿಯಂತ್ರಣ ದಳ ಮತ್ತು ಅರಣ್ಯ ಇಲಾಖೆಯ ಜಂಟಿ ತಂಡವು ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ಹಾವಿನ ವಿಷವನ್ನು ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ ಏಳು ಜನರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
₹80 ಕೋಟಿ ಮೌಲ್ಯದ 1,200 ಗ್ರಾಂ ಹಾವಿನ ವಿಷ ಮತ್ತು ₹15 ಲಕ್ಷದಿಂದ ₹20 ಲಕ್ಷ ಮೌಲ್ಯದ 2.5 ಕೆ.ಜಿ ಚಿಪ್ಪು ಹಂದಿಯ ಚಿಪ್ಪುಗಳನ್ನು ವಶಪಡಿಸಿಕೊಳ್ಳಲಾಗಿದೆ.
‘ಖಚಿತ ಮಾಹಿತಿ ಆಧರಿಸಿ ತಂಡವು ಬುಧವಾರ ದಾಳಿ ನಡೆಸಿ ಮೂವರನ್ನು ಬಂಧಿಸಿತ್ತು ಮತ್ತು ಶುಕ್ರವಾರ ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ನಾಲ್ವರನ್ನು ಬಂಧಿಸಿದೆ. ಈ ದಂಧೆಯಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆಯಿದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಲಾಗಿದೆ’ ಎಂದು ಮೇದಿನಿನಗರ ಜಿಲ್ಲಾ ಅರಣ್ಯಾಧಿಕಾರಿ ಸತ್ಯಂ ಕುಮಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.