ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ಪಿಟಿಐ ಚಿತ್ರ
ಪಣಜಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿರುದ್ಧ ಬೆದರಿಕೆ ಹೇಳಿಕೆ ನೀಡಿದ್ದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ರಾಮಾ ಕಂಕಣಕರ್ ಎನ್ನುವವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಗರದ ಆಜಾದ್ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಾವಂತ್ ವಿರುದ್ಧ ಅವಹೇಳನಕಾರಿ ಮತ್ತು ದ್ವೇಷಪೂರಿತ ಹೇಳಿಕೆ ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪಣಜಿ ಪೊಲೀಸರು ತಿಳಿಸಿದ್ದಾರೆ.
ಎಫ್‌ಐಆರ್‌ನಲ್ಲಿ ಆರೋಪಿಯು ‘ಮುಖ್ಯಮಂತ್ರಿಯನ್ನು ಜೀವಂತವಾಗಿ ಸುಟ್ಟುಹಾಕುತ್ತೇವೆ’ ಎಂದು ಹೇಳಿಕೆ ನೀಡಿದ್ದರು. ಇದು ಸಾಮಾನ್ಯ ಜನರಲ್ಲಿ ದ್ವೇಷ ಭಾವನೆ ಹುಟ್ಟುಹಾಕುವುದಲ್ಲದೆ ಮುಖ್ಯಮಂತ್ರಿಯ ವಿರುದ್ಧವೂ ಪ್ರಚೋದನೆ ನೀಡಿದಂತಾಗಲಿದೆ ಎಂದು ಉಲ್ಲೇಖಿಸಲಾಗಿದೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಕ್ರಿಮಿನಲ್ ಬೆದರಿಕೆ ಮತ್ತು ಸಾರ್ವಜನಿಕ ಕಿಡಿಗೇಡಿತನ ಅಡಿ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಆರೋಪಿಗೆ ಸಮನ್ಸ್ ನೀಡಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿರುವುದಾಗಿ ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.