ADVERTISEMENT

ಕೋವಿಡ್‌ ಇಳಿಕೆ: ಉತ್ತರ ಪ್ರದೇಶದಲ್ಲಿ ಪ್ರಾಥಮಿಕ ಶಾಲೆಗಳು ಆರಂಭ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 6:58 IST
Last Updated 1 ಮಾರ್ಚ್ 2021, 6:58 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಲಖನೌ: ಕೋವಿಡ್‌ ಪ್ರಕರಣಗಳು ಇಳಿಕೆಯಾಗುತ್ತಿರುವೆ ಬೆನ್ನಲೇ ಉತ್ತರ ಪ್ರದೇಶದಲ್ಲಿ ಪ್ರಾಥಮಿಕ ಶಾಲೆಗಳು ಇಂದಿನಿಂದ (ಮಾ.1) ಆರಂಭವಾಗಿವೆ.

ಉತ್ತರ ಪ್ರದೇಶ ಸರ್ಕಾರ ಕಟ್ಟುನಿಟ್ಟಿನ ಕೋವಿಡ್‌ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ, ಅದರ ಪ್ರಕಾರವಾಗಿಯೇ ಪ್ರಾಥಮಿಕ ಶಾಲೆಗಳನ್ನು ಸುರಕ್ಷಿತವಾಗಿಪುನರಾರಂಭ ಮಾಡಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಶಾಲೆಗಳನ್ನು ಮುಚ್ಚಲಾಗಿತ್ತು.

ರಾಜ್ಯ ಸರ್ಕಾರ ಕಳೆದ ಫೆಬ್ರುವರಿಯಲ್ಲಿ ಹೊರಡಿಸಿದ ಆದೇಶದ ಅನ್ವಯ ಪ್ರಾಥಮಿಕ ಶಾಲೆಗಳನ್ನು ತೆರೆಯಲಾಗಿದೆ. ವಿದ್ಯಾರ್ಥಿಗಳ ನಡುವೆ ಅಂತರ, ಫೇಸ್ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಕಡ್ಡಾಯ ಮಾಡಲಾಗಿದೆ. ಶೇ. 50ರಷ್ಟು ಹಾಜರಾತಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಉತ್ತರ ಪ್ರದೇಶಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ರಾಜ್ಯದಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳು ಆರಂಭಗೊಂಡಿವೆ. ಪೋಷಕರ ಸಮ್ಮತಿ ಪಡದೇ ಶಾಲೆಗಳನ್ನು ಆರಂಭಿಸಲಾಗಿದೆ. ಎಲ್ಲಾ ಶಾಲೆಗಳಲ್ಲೂ ಕೋವಿಡ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಸ್ಥಿತಿ ನೋಡಿಕೊಂಡು ಮುಂದಿನ ದಿನಗಳಲ್ಲಿ ಶೇ 100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಜನವರಿ ಹಾಗೂ ಫೆಬ್ರುವರಿಯಲ್ಲಿ ಹಂತ ಹಂತವಾಗಿಪ್ರೌಢಶಾಲೆ ಹಾಗೂ ಕಾಲೇಜು ತರಗತಿಗಳನ್ನು ಆರಂಭ ಮಾಡಲಾಗಿತ್ತು. ಇದೀಗ ಎಲ್ಲಾ ಹಂತದ ತರಗತಿಗಳು ಪ್ರಾರಂಭವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.