ನವದೆಹಲಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಾಮಾಜಿಕ ಮಾಧ್ಯಮಗಳ ಖಾತೆಗಳಿಗೆ ಭಾರತದಲ್ಲಿ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ಪಾಕಿಸ್ತಾನದ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಬಿಲಾವಲ್ ಭುಟ್ಟೊ ಜರ್ದಾರಿ ಅವರ ಖಾತೆಯನ್ನೂ ಭಾರತದಲ್ಲಿ ತಡೆಹಿಡಿಯಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬೆನ್ನಲ್ಲೇ ಭಾರತದ ಬಗ್ಗೆ ಸುಳ್ಳು, ಪ್ರಚೋದನಕಾರಿ ಹಾಗೂ ಕೋಮು ಭಾವನೆ ಕೆರಳಿಸುವ ಆರೋಪದ ಮೇಲೆ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿತ್ತು.
ಇದರ ಬೆನ್ನಲ್ಲೇ ಪಾಕಿಸ್ತಾನದ ಪ್ರಮುಖ ಸೆಲೆಬ್ರಿಟಿಗಳ ಖಾತೆಗಳನ್ನು ನಿರ್ಬಂಧಿಸಲಾಗಿತ್ತು. ಪಾಕಿಸ್ತಾನದ ಮಾಜಿ ಕ್ರಿಕೆಟಿಗರಾದ ಶೋಯಬ್ ಅಖ್ತರ್ ಹಾಗೂ ಶಾಹೀದ್ ಅಫ್ರಿದಿ ಯೂಟ್ಯೂಬ್ ಖಾತೆಗಳನ್ನು ನಿಷೇಧಿಸಲಾಗಿದೆ. ಜಾವೆಲಿನ್ ತಾರೆ ಅರ್ಷದ್ ನದೀಮ್ ಅವರ ಇನ್‌ಸ್ಟಾಗ್ರಾಂ ಖಾತೆಯನ್ನು ತಡೆಹಿಡಿಯಲಾಗಿದೆ.
ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.