ಕೋಲ್ಕತ್ತ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ವಿಡಿಯೊ ಹಂಚಿಕೊಂಡ ಆರೋಪದಡಿ ಬಂಧಿಸಲಾಗಿದ್ದ ಕಾನೂನು ವಿದ್ಯಾರ್ಥಿನಿ ಶರ್ಮಿಷ್ಠಾ ಪನೋಲಿ ಅವರಿಗೆ ಕೋಲ್ಕತ್ತ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಅವರು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಕೋಲ್ಕತ್ತ ಪೊಲೀಸರು ಶರ್ಮಿಷ್ಠಾ ಪನೋಲಿ ಅವರನ್ನು ಕಳೆದ ವಾರ ಬಂಧಿಸಿದ್ದರು. ಅವರ ವಿರುದ್ಧ ಗಾರ್ಡನ್ ರೀಚ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅನುಮತಿ ಇಲ್ಲದೆ ದೇಶ ತೊರೆಯದಂತೆ ಶರ್ಮಿಷ್ಠಾಗೆ ಕೋರ್ಟ್ ಸೂಚಿಸಿದೆ. ಆದರೆ, ಶೈಕ್ಷಣಿಕ ಉದ್ದೇಶದಿಂದ ವಿದೇಶಕ್ಕೆ ಹೋಗಲು ಅವಕಾಶ ನೀಡಬೇಕೆಂದು ಕೋರಿ ಅವರು ಸಲ್ಲಿಸಿರುವ ಅರ್ಜಿ ಪರಿಗಣಿಸಲು ವಿಚಾರಣಾ ನ್ಯಾಯಾಲಯಕ್ಕೆ ಅವಕಾಶ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.