ನಾಗಪುರ: ಮಹಾರಾಷ್ಟ್ರ ಮೂಲದ ಸಾಮಾಜಿಕ ಕಾರ್ಯಕರ್ತ ಹಾಗೂ ಮ್ಯಾಗ್ಸೆಸೆ ಪುರಸ್ಕೃತ ಪ್ರಕಾಶ್ ಆಮ್ಟೆ ಅವರು ಅನಾರೋಗ್ಯದಿಂದಾಗಿ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪುಣೆಯ ಬಿಜೆ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರಿಗೆ ಕೆಮ್ಮು ಮತ್ತು ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಅವರು ಪೂರ್ತಿ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ತಿಳಿಸಿದ್ದಾರೆ ಎಂದು ಅವರ ಕುಟುಂಬ ಸದಸ್ಯರೊಬ್ಬರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.