ADVERTISEMENT

ಕಾಶ್ಮೀರದಲ್ಲಿ ಹಿಮಕುಸಿತ: ಯೋಧ ಸಾವು, ಇಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 7:09 IST
Last Updated 18 ನವೆಂಬರ್ 2020, 7:09 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ವ್ಯಾಪ್ತಿಯಲ್ಲಿ ಮಂಗಳವಾರ ಸಂಭವಿಸಿದ ಹಿಮಕುಸಿತದಲ್ಲಿ ಯೋಧರೊಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

‘ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಹಿಮ ಕುಸಿತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸೈನಿಕರು ಕೊಚ್ಚಿ ಹೋಗಿದ್ದರು. ಅವರನ್ನು ತಕ್ಷಣವೇ ರಕ್ಷಿಸಿ, ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ನಿಖಿಲ್‌ ಶರ್ಮಾ ಎಂಬುವವರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಯೋಧರಾದ ರಮೇಶ್ ಚಂದ್‌ ಮತ್ತು ಗುರ್ವಿಂದರ್ ಸಿಂಗ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕುಪ್ವಾರ, ಬಂಡಿಪೊರ, ಬಾರಾಮುಲ್ಲಾ ಮತ್ತು ಗಂಡೇರ್ಬಲ್‌ನಲ್ಲಿ ಸೋಮವಾರ ಹಿಮಾಪಾತ ಸಂಭವಿಸುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.