ಜಮ್ಮು: ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಸಮೀಪ ಶನಿವಾರ ಬೆಳಿಗ್ಗೆ ಪಾಕಿಸ್ತಾನದ ರಕ್ಷಣಾ ಪಡೆಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ರಕ್ಷಣಾಪಡೆಯ ಯೋಧರೊಬ್ಬರು ಸಾವನ್ನಪ್ಪಿದ್ದಾರೆ.
ನೌಶೇರಾ ಸೆಕ್ಟರ್‌ನಲ್ಲಿ ಲ್ಯಾಮ್ ಪ್ರದೇಶದಲ್ಲಿರುವ ಗಡಿಯುದ್ದಕ್ಕೂ ಪಾಕಿಸ್ತಾನ ಪಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿತು. ಘಟನೆಯಲ್ಲಿ ಹವಲ್ದಾರ್ ಒಬ್ಬರು ತೀವ್ರವಾಗಿ ಗಾಯಗೊಂಡು, ನಂತರ ಸಾವನ್ನಪ್ಪಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಕಿಸ್ತಾನದ ಈ ದಾಳಿಗೆ ಭಾರತೀಯ ಸೇನೆಯು ತೀವ್ರವಾಗಿ ಪ್ರತೀಕಾರ ತೀರಿಸಿತು. ಎರಡೂ ದೇಶಗಳ ನಡುವೆ ಸ್ವಲ್ಪ ಸಮಯದವರೆಗೆ ಗಡಿಯಾಚೆಗೆ ಗುಂಡಿನ ದಾಳಿ ಮುಂದುವರೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.