ಜಮ್ಮು: ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪಡೆಗಳು ಶನಿವಾರ ರಾತ್ರಿ ಗುಂಡಿನ ದಾಳಿ ನಡೆಸಿದ ಕಾರಣ ಸೈನಿಕನೊಬ್ಬ ಹುತಾತ್ಮನಾಗಿದ್ದು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂಂಚ್ ಮತ್ತು ರಜೌರಿ ಅವಳಿ ಜಿಲ್ಲೆಯ ಗಡಿ ಭಾಗದ ಗ್ರಾಮಗಳಲ್ಲಿ ಈ ತಿಂಗಳಲ್ಲಿ ಪಾಕಿಸ್ತಾನದ ಪಡೆಗಳು ನಡೆಸಿದ ಮೂರನೇ ದಾಳಿ ಇದಾಗಿದೆ.
ಷಾಪುರ– ಕೆರ್ನಿ ವಲಯದ ಗಡಿ ಭಾಗದಲ್ಲಿ ಗುಂಡಿನ ದಾಳಿಗೆ ಭಾರತದ ಸೈನಿಕರೂ ಪ್ರತಿ ದಾಳಿ ನಡೆಸಿದರು. ಗುಂಡಿನ ಚಕಮಕಿಯಲ್ಲಿ ಭಾರತದ ಮೂವರು ಸೈನಿಕರು ಗಾಯಗೊಂಡರು. ತಕ್ಷಣ ಇವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಒಬ್ಬ ಸೈನಿಕ ಸಾವನ್ನಪ್ಪಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.