ADVERTISEMENT

Video | ಯೋಧನಿಗೆ ಕಾಲಿನಿಂದ ಒದ್ದು, ಹಿಗ್ಗಾಮುಗ್ಗಾ ಥಳಿಸಿದ ಕಾವಡ್‌ ಯಾತ್ರಿಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜುಲೈ 2025, 6:27 IST
Last Updated 20 ಜುಲೈ 2025, 6:27 IST
<div class="paragraphs"><p>ಯೋಧನಿಗೆ&nbsp;ಹಿಗ್ಗಾಮುಗ್ಗಾ ಥಳಿಸಿದ ಕಾವಡ್‌ ಯಾತ್ರಿಗಳು</p></div>

ಯೋಧನಿಗೆ ಹಿಗ್ಗಾಮುಗ್ಗಾ ಥಳಿಸಿದ ಕಾವಡ್‌ ಯಾತ್ರಿಗಳು

   

(ಚಿತ್ರ –@GauravPandhi)

ಲಖನೌ: ಕಾವಡ್‌ ಯಾತ್ರಿಗಳ ಗುಂಪೊಂದು ಸಿಆರ್‌ಪಿಎಫ್ ಯೋಧನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ನಡೆದಿದೆ.

ADVERTISEMENT

ಕೇಂದ್ರ ಮೀಸಲು ಪೊಲೀಸ್ ಪಡೆಯ ಯೋಧರೊಬ್ಬರು, ಮಿರ್ಜಾಪುರ ನಿಲ್ದಾಣದಲ್ಲಿ ಬ್ರಹ್ಮಪುತ್ರ ರೈಲಿಗಾಗಿ ಕಾಯುತ್ತಿದ್ದರು. ಈ ವೇಳೆ ಫ್ಲಾಟ್‌ಫಾಮ್‌ಗೆ ಬಂದ ಕೆಲವು ಕಾವಡ್‌ ಯಾತ್ರಿಗಳು ಟಿಕೆಟ್ ಖರೀದಿ ವಿಚಾರವಾಗಿ ಯೋಧನೊಂದಿಗೆ ವಾಗ್ವಾದ ನಡೆಸಿದ್ದಾರೆ. ಬಳಿಕ ಅವರನ್ನು ನೆಲಕ್ಕೆ ಬೀಳಿಸಿ, ಕಾಲಿನಿಂದ ಒದ್ದು ಮನಬಂದಂತೆ ಥಳಿಸಿದ್ದಾರೆ.

ಘಟನೆ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಕೇಸರಿ ಬಣ್ಣದ ವಸ್ತ್ರ ಧರಿಸಿದ ಸುಮಾರು ಏಳೆಂಟು ಮಂದಿ ಕಾವಡ್‌ ಯಾತ್ರಿಗಳು ಯೋಧನನ್ನು ಸುತ್ತುವರೆದಿದ್ದು, ಅವರನ್ನು ಹಿಡಿದು ಎಳೆಯುತ್ತಿರುವುದು, ಕಾಲಿನಿಂದ ಒದೆಯುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಪ್ರಕರಣ ಸಂಬಂಧ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ರೈಲ್ವೆ ಪೊಲೀಸ್ ಪಡೆಯ ಇನ್ಸ್‌ಪೆಕ್ಟರ್ ಚಮನ್ ಸಿಂಗ್ ತೋಮರ್ ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ 9.30ರ ಸುಮಾರಿಗೆ, ಸಿಆರ್‌ಪಿಎಫ್ ಯೋಧರೊಬ್ಬರು ಮಿರ್ಜಾಪುರ ನಿಲ್ದಾಣದಲ್ಲಿ ಬ್ರಹ್ಮಪುತ್ರ ರೈಲಿಗಾಗಿ ಕಾಯುತ್ತಿದ್ದರು. ಆಗ ಅಲ್ಲಿಗೆ ಬಂದ ಕಾವಡ್‌ ಯಾತ್ರಿಗಳು ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. ಸದ್ಯ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.