ADVERTISEMENT

ಜಮ್ಮು: ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ

ಪಿಟಿಐ
Published 18 ಏಪ್ರಿಲ್ 2021, 8:02 IST
Last Updated 18 ಏಪ್ರಿಲ್ 2021, 8:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು: ‘ಜಮ್ಮು–ಕಾಶ್ಮೀರದ ರಾಮಬನ್ ಜಿಲ್ಲೆಯ ಶಿಬಿರದಲ್ಲಿ ಸೇನಾ ಸಿಬ್ಬಂದಿಯೊಬ್ಬರುತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಭಾನುವಾರ ತಿಳಿಸಿದರು.

‘ಸಿಪಾಯಿ ಹನುಮಾನ್ ಚೌಧರಿ ಅವರು ಶನಿವಾರ ಮಧ್ಯರಾತ್ರಿ ಉಖ್ರಾಲ್ ಪ್ರದೇಶದಲ್ಲಿರುವ ಶಿಬಿರದಲ್ಲಿ ಈ ಕೃತ್ಯ ಎಸಗಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ. ಈ ಬಗ್ಗೆ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT