ಸಾವು (ಪ್ರಾತಿನಿಧಿಕ ಚಿತ್ರ)
ನಾಗ್ಪುರ: ತಾಯಿಯನ್ನು ನಿಂದಿಸಿದ ತಂದೆಯನ್ನು ಕೊಲೆ ಮಾಡಿದ ಆರೋಪದಲ್ಲಿ 19 ವರ್ಷದ ಮಗನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ನ್ಶುಲ್ ಅಲಿಯಾಸ್ ಗೌರವ್ ಬಾಬಾರಾವ್ ಜೈಪುರಕರ್ ಬಂಧಿತ ಆರೋಪಿ.
ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಕೊಂಡಲಿ ಪಟ್ಟಣದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ವೃತ್ತಿಯಲ್ಲಿ ಮೋಟಾರ್ ಮೆಕ್ಯಾನಿಕ್ ಆಗಿರುವ ಆರೋಪಿ ಊಟಕ್ಕೆ ಮನೆಗೆ ಬಂದಾಗ ಈ ಘಟನೆ ಸಂಭವಿಸಿದೆ.
ಮನೆಗೆ ಬಂದಿದ್ದಾಗ, ತಂದೆ ಬಾಬಾರಾವ್ ಮಧುಕರ್ ಜೈಪುರಕರ್ (52) ತನ್ನ ತಾಯಿಯನ್ನು ನಿಂದಿಸಿದ್ದಾರೆ. ಈ ವೇಳೆ ಅನ್ಶುಲ್ ಮರದ ತುಂಡಿನಿಂದ ತಂದೆಯ ತಲೆಗೆ ಹೊಡೆದಿದ್ದಾನೆ. ಕೂಡಲೇ ತಂದೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ತಂದೆ ಮದ್ಯ ವ್ಯಸನಿಯಾಗಿದ್ದು, ಯಾವುದೇ ಕೆಲಸ ಮಾಡುತ್ತಿರಲಿಲ್ಲ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.