ADVERTISEMENT

ಆರ್‌ಪಿಎಫ್‌ನ ಮೊದಲ ಮಹಿಳಾ ಮಹಾನಿರ್ದೇಶಕಿಯಾಗಿ ಸೋನಾಲಿ ಮಿಶ್ರಾ ಅಧಿಕಾರ ಸ್ವೀಕಾರ

ಅಜಿತ್ ಅತ್ರಾಡಿ
Published 2 ಆಗಸ್ಟ್ 2025, 4:05 IST
Last Updated 2 ಆಗಸ್ಟ್ 2025, 4:05 IST
<div class="paragraphs"><p>ಸೋನಾಲಿ ಮಿಶ್ರಾ</p></div>

ಸೋನಾಲಿ ಮಿಶ್ರಾ

   

Credit:X/@RPF_INDIA

ನವದೆಹಲಿ: ರೈಲ್ವೆ ಭದ್ರತಾ ಪಡೆಯ (ಆರ್‌ಪಿಎಫ್‌) ಮಹಾನಿರ್ದೇಶಕಿಯಾಗಿ ಹಿರಿಯ ‍ಐಪಿಎಸ್‌ ಅಧಿಕಾರಿ ಸೋನಾಲಿ ಮಿಶ್ರಾ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಸೋನಾಲಿ ಅವರು ಈ ಹುದ್ದೆಗೆ ಏರಿದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿಯಾಗಿದ್ದಾರೆ.

ADVERTISEMENT

ಮನೋಜ್‌ ಯಾದವ್ ಅವರಿಂದ ತೆರವಾದ ಸ್ಥಾನಕ್ಕೆ 1993ನೇ ಬ್ಯಾಚ್‌ನ ‍ಐಪಿಎಸ್‌ ಅಧಿಕಾರಿಯಾಗಿರುವ ಸೋನಾಲಿ ಮಿಶ್ರಾ ಅವರನ್ನು ಆರ್‌ಪಿಎಫ್‌ ಮಹಾನಿರ್ದೇಶಕರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಜುಲೈ 14ರಂದು ಆದೇಶ ಹೊರಡಿಸಿತ್ತು.

ಇದಕ್ಕೂ ಮುನ್ನ ಸೋನಾಲಿ ಅವರು ಮಧ್ಯಪ್ರದೇಶ ಪೊಲೀಸ್‌ ಇಲಾಖೆಯಲ್ಲಿ ಹೆಚ್ಚುವರಿ ಮಹಾನಿರ್ದೇಶಕರಾಗಿ (ಆಯ್ಕೆ) ಕಾರ್ಯನಿರ್ವಹಿಸುತ್ತಿದ್ದರು. ಸೋನಾಲಿ ಅವರು 2026ರ ಅಕ್ಟೋಬರ್‌ 31ರವರೆಗೆ ರೈಲ್ವೆ ಭದ್ರತಾ ಪಡೆಯ ಮಹಾನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ.

ಸೋನಾಲಿ ಅವರು ಸಿಬಿಐ, ಬಿಎಸ್ಎಫ್‌ನಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಜತೆಗೆ, ಕೊಸೊವೊದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ರಾಷ್ಟ್ರಪತಿಗಳ ಪೊಲೀಸ್ ಪದಕ ಸೇರಿದಂತೆ ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.