
ಪಿಟಿಐ
ನವದೆಹಲಿ: ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರ ಬಂಧನವನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಆಂಗ್ಮೊ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 2026ರ ಜನವರಿ 7ಕ್ಕೆ ಮುಂದೂಡಿದೆ.
ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಸೆಪ್ಟೆಂಬರ್ 26ರಂದು ವಾಂಗ್ಚೂಕ್ ಅವರನ್ನು ಬಂಧಿಸಲಾಗಿದೆ.
ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ.ಅಂಜಾರಿಯಾ ಅವರ ನೇತೃತ್ವದ ನ್ಯಾಯಪೀಠವು, ಸಮಯದ ಅಭಾವದಿಂದ ವಿಚಾರಣೆಯನ್ನು ಮುಂದೂಡಿದೆ.
ವಾಂಗ್ಚೂಕ್ ಅವರ ಬಂಧನವು ಅಕ್ರಮ ಮತ್ತು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.