ನವದೆಹಲಿ: ಬಂಧನದಲ್ಲಿರುವ ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರ ಬಿಡುಗಡೆ ಕೋರಿ, ಅವರ ಪತ್ನಿ ಗೀತಾಂಜಲಿ ಆಂಗ್ಮೊ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಲಡಾಖ್ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿ ಅರವಿಂದ ಕುಮಾರ್ ಹಾಗೂ ಎನ್.ವಿ ಅಂಜಾರಿಯಾ ಅವರಿದ್ದ ಪೀಠವು, ಪ್ರತಿಕ್ರಿಯೆ ನೀಡುವಂತೆ ಸೂಚಿಸಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿತು.
ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಿದ ಕಾರಣಕ್ಕೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ವಾಂಗ್ಚೂಕ್ ಅವರನ್ನು ಸೆ.26ರಂದು ಬಂಧಿಸಲಾಯಿತು. ಇದನ್ನು ಪ್ರಶ್ನಿಸಿ ಗೀತಾಂಜಲಿ ಅವರು ಸುಪ್ರೀಂ ಮೆಟ್ಟಿಲೇರಿದ್ದಾರೆ.
ವಾಂಗ್ಚೂಕ್ ಅವರನ್ನು ರಾಜಸ್ಥಾನದ ಜೋಧಪುರ ಜೈಲಿನಲ್ಲಿರಿಸಲಾಗಿದೆ.
ಲಡಾಖ್‌ಗೆ 6ನೇ ಪರಿಚ್ಛೇದದ ಮತ್ತು ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, 4 ಮಂದಿ ಸಾವಿಗೀಡಾದರು ಹಾಗೂ 90 ಮಂದಿ ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.