ADVERTISEMENT

ವಾಂಗ್ಚುಕ್ ಬಂಧನ ಪ್ರಶ್ನಿಸಿ ಪತ್ನಿ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ SC

ಪಿಟಿಐ
Published 6 ಅಕ್ಟೋಬರ್ 2025, 6:09 IST
Last Updated 6 ಅಕ್ಟೋಬರ್ 2025, 6:09 IST
<div class="paragraphs"><p>ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್‌</p></div>

ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್‌

   

ಪಿಟಿಐ ಚಿತ್ರ

ನವದೆಹಲಿ: ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಲೇಹ್‌– ಲಡಾಖ್‌ನಲ್ಲಿ ನಡೆದ ಹಿಂಸಾಚಾರದ ವೇಳೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್‌ರನ್ನು ಪೊಲೀಸರು ಬಂಧಿಸಿದ್ದರು.

ADVERTISEMENT

ವಾಂಗ್ಚುಕ್‌ರನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕೋರಿ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್. ವಿ. ಅಂಜಾರಿಯಾ ಅವರಿದ್ದ ಪೀಠವು, ಕೇಂದ್ರ ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಿಂದ ಪ್ರತಿಕ್ರಿಯೆ ಕೇಳಿದೆ.

ಜತೆಗೆ ವಾಂಗ್ಚುಕ್ ಅವರ ಪತ್ನಿಯ ಅರ್ಜಿಯ ಕುರಿತ ಯಾವುದೇ ಆದೇಶವನ್ನು ನೀಡಲು ನಿರಾಕರಿಸಿದ್ದು, ಪ್ರಕರಣದ ವಿಚಾರಣೆಯನ್ನು ಅ.14 ಕ್ಕೆ ಮುಂದೂಡಿತು.

ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್‌ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಸೆ.26ರಂದು ಲೇಹ್‌ ಅಪೆಕ್ಸ್‌ ಬಾಡಿ (ಎಲ್‌ಎಬಿ) ಬಂದ್‌ಗೆ ಕರೆ ನೀಡಿತ್ತು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಸಂಘರ್ಷ ಉಲ್ಬಣಗೊಂಡು, ನಾಲ್ವರು ಮೃತಪಟ್ಟು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.