ADVERTISEMENT

ಲೇಹ್‌ನಲ್ಲಿ ಹಿಂಸಾಚಾರ: ಉಪವಾಸ ಸತ್ಯಾಗ್ರಹ ಮೊಟಕುಗೊಳಿಸಿದ ವಾಂಗ್‌ಚುಕ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಸೆಪ್ಟೆಂಬರ್ 2025, 13:27 IST
Last Updated 24 ಸೆಪ್ಟೆಂಬರ್ 2025, 13:27 IST
<div class="paragraphs"><p>ಸೋನಂ ವಾಂಗ್‌ಚುಕ್‌</p></div>

ಸೋನಂ ವಾಂಗ್‌ಚುಕ್‌

   

ಲಡಾಖ್: ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ನಡೆಸುತ್ತಿದ್ದ ಚಳುವಳಿ ಹಿಂಸೆಗೆ ತಿರುಗಿದ್ದರಿಂದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ತಮ್ಮ ಉಪವಾಸ ಸತ್ಯಾಗ್ರಹವನ್ನು 15 ದಿನಕ್ಕೆ ಮೊಟಕುಗೊಳಿಸಿದ್ದಾರೆ.

ಬೀದಿಗಿಳಿದ ಸಾವಿರಾರು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಬಿಜೆಪಿ ಕಚೇರಿ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಯುವಕರು ಶಾಂತಿಯಿಂದ ಇರಬೇಕು ಎಂದು ಮನವಿ ಮಾಡಿದ ವಾಂಗ್‌ಚುಕ್‌, ಹಿಂಸಾಚಾರವನ್ನು ನಿಲ್ಲಿಸುವಂತೆ ಕೋರಿದ್ದಾರೆ.

ADVERTISEMENT

‘ಲಡಾಖ್‌ನ ಯುವಕರು ತಕ್ಷಣವೇ ಹಿಂಸಾಚಾರ ನಿಲ್ಲಿಸಬೇಕೆಂದು ನಾನು ವಿನಂತಿಸುತ್ತೇನೆ, ಇದು ನಮ್ಮ ಉದ್ದೇಶಕ್ಕೆ ಹಾನಿಯನ್ನುಂಟುಮಾಡುತ್ತದೆ. ಅಲ್ಲದೆ ‌ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ. ಲಡಾಖ್ ಮತ್ತು ದೇಶದಲ್ಲಿ ಅಸ್ಥಿರತೆಯನ್ನು ಉಂಟು ಮಾಡಲು ನಾವು ಬಯಸುವುದಿಲ್ಲ’ ಎಂದು ವಾಂಗ್‌ಚುಕ್ ಮುಷ್ಕರದ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದ್ದಾರೆ.

ಸೋನಮ್ ವಾಂಗ್‌ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದ ಸಮಯದಲ್ಲಿ ಅವರ ಇಬ್ಬರು ಬೆಂಬಲಿಗರ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ಲಡಾಖ್‌ನ ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.