
ಪಿಟಿಐ
ಜೋಧಪುರ: ಜೋಧಪುರ ಕೇಂದ್ರ ಕಾರಾಗೃಹದಲ್ಲಿರುವ ಪರಿಸರ ಹೋರಾಟಗಾರ ಸೋನಮ್ ವಾಂಗ್ಚೂಕ್ ಅವರನ್ನು ನಗರದಲ್ಲಿರುವ ಏಮ್ಸ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಲಾಯಿತು.
ವಾಂಗ್ಚೂಕ್ ಅವರನ್ನು ಆಸ್ಪತ್ರೆಯ ‘ಗ್ಯಾಸ್ಟ್ರೋ ಎಂಟರಾಲಜಿ’ (ಜಠರ ಮತ್ತು ಕರಳು ಬೇನೆ) ಘಟಕದಲ್ಲಿ ಒಂದೂವರೆ ಗಂಟೆ ತಪಾಸಣೆಗೊಳಪಡಿಸಲಾಯಿತು.
ಮಲಿನಗೊಂಡಿರುವ ನೀರು ಕುಡಿದು ಹೊಟ್ಟೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವಾಂಗ್ಚೂಕ್ ಅವರು ದೂರು ನೀಡಿದ್ದರು.
ತಜ್ಞ ವೈದ್ಯರಿಂದ ವಾಂಗ್ಚೂಕ್ ಅವರ ವೈದ್ಯಕೀಯ ತಪಾಸಣೆ ನಡೆಸಿ, ವರದಿಯನ್ನು ಸೋಮವಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಜೈಲು ಅಧಿಕಾರಿಗಳಿಗೆ ಸೂಚಿಸಿತ್ತು. ನ್ಯಾಯಾಲಯದ ಆದೇಶದಂತೆ ವಾಂಗ್ಚೂಕ್ ಅವರ ಆರೋಗ್ಯ ತಪಾಸಣೆಯನ್ನು ಶನಿವಾರ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.