ನವದೆಹಲಿ: ಸೋನಿಯಾ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ವೈಯಕ್ತಕ ಲಾಭಕ್ಕಾಗಿ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಯಂಗ್ ಇಂಡಿಯನ್ (ವೈಐ) ಕಂಪೆನಿ ಮೂಲಕ ಸಾರ್ವಜನಿಕ ಹಣವನ್ನು ತಮಗಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಆರೋಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
‘ಯಂಗ್ ಇಂಡಿಯಾ ಮತ್ತು ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್‌ನಲ್ಲಿ (ಎಜೆಎಲ್) ನಡೆದಿದೆ ಎನ್ನಲಾದ ಚಟುವಟಿಕೆ ಬಗ್ಗೆ ಅರಿವಿಲ್ಲ’ ಎಂದು ಇ.ಡಿ ವಿಚಾರಣೆ ಸಂದರ್ಭದಲ್ಲಿ ರಾಹುಲ್ ಮತ್ತು ಸೋನಿಯಾ ಗಾಂಧಿ ಹೇಳಿಕೆ ನೀಡಿದ್ದಾರೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿವೆ.
ಈ ಕಂಪೆನಿಗಳಿಗೆ ಸಂಬಂಧಿಸಿದ ಆಡಳಿತಾತ್ಮಕ ಮತ್ತು ಆರ್ಥಿಕ ವ್ಯವಹಾರಗಳನ್ನು ಕಾಂಗ್ರೆಸ್ ನಾಯಕ ದಿವಂಗತ ಮೋತಿಲಾಲ್ ವೋರಾ ಅವರು ನೋಡಿಕೊಳ್ಳುತ್ತಿದ್ದರು ಎಂದು ತನಿಖಾ ಸಂಸ್ಥೆಗೆ ಹೇಳಿದ್ದಾರೆ ಎಂದು ತಿಳಿಸಿವೆ.
ಏಪ್ರಿಲ್ 9ರಂದು ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.