ADVERTISEMENT

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಪಿಟಿಐ
Published 3 ಮಾರ್ಚ್ 2023, 9:28 IST
Last Updated 3 ಮಾರ್ಚ್ 2023, 9:28 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ    

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಜ್ವರದ ಹಿನ್ನೆಲೆಯಲ್ಲಿ ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್‌ ಬುಲೆಟಿನ್‌ನಲ್ಲಿ ಹೇಳಲಾಗಿದೆ.

ಗುರುವಾರ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ.

ADVERTISEMENT

ಜ್ವರದಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರಿಗೆ ಗಂಗಾರಾಮ್‌ ಆಸ್ಪತ್ರೆಯ ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ಸಲಹೆಗಾರ ಅರೂಪ್ ಬಸು ಮತ್ತು ಅವರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಟ್ರಸ್ಟ್ ಸೊಸೈಟಿಯ ಅಧ್ಯಕ್ಷ ಡಿ. ಎಸ್. ರಾಣಾ ತಿಳಿಸಿದ್ದಾರೆ.

‘ವೈದ್ಯರ ತಂಡ ಸೋನಿಯಾ ಗಾಂಧಿ ಅವರ ನಿಗಾ ವಹಿಸಿದೆ. ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ತಪಾಸಣೆಗಳು ನಡೆಯುತ್ತಿವೆ. ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಬುಲೆಟಿನ್‌ನಲ್ಲಿ ಉಲ್ಲೇಖಿಸಲಾಗಿದೆ.

ಸೋನಿಯಾ ಗಾಂಧಿ ಅವರು ಬ್ರಾಂಕೈಟಿಸ್ (ಶ್ವಾಸನಾಳದ ಉರಿಯೂತದಿಂದಾಗಿ ತೀವ್ರ ಕೆಮ್ಮು ಉಂಟಾಗುವುದು) ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕೆಲ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.