
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಮಂಗಳವಾರ ಹೇಳಿವೆ.
ಅವರು ಚೆನ್ನಾಗಿದ್ದಾರೆ ಮತ್ತು ಶ್ವಾಸಕೋಶದ ತಜ್ಞರು ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿಯವರು ದೀರ್ಘ ಕಾಲದಿಂದ ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕಾಗಿ ನಿಯಮಿತ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಬರುತ್ತಿದ್ದರು. ಸೋಮವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.
2025ರ ಡಿಸೆಂಬರ್‌ನಲ್ಲಿ ಸೋನಿಯಾ ಗಾಂಧಿ ಅವರು 79ನೇ ವರ್ಷಕ್ಕೆ ಕಾಲಿರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.