ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿರುವ ಕಾರಣ, ದೀರ್ಘಕಾಲದ ಎದೆಯ ಸೋಂಕಿನಿಂದ ಬಳಲುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿಯವರಿಗೆ ದೆಹಲಿ ತೊರೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಅವರನ್ನು ಕೆಲವು ದಿನಗಳ ಕಾಲ ಗೋವಾಕ್ಕೆ ಕರೆದೊಯ್ಯಲಾಗಿದೆ.
ಸೋನಿಯಾ ಗಾಂಧಿ ಅವರು ಇಂದು (ಶುಕ್ರವಾರ) ಮಧ್ಯಾಹ್ನ ದೆಹಲಿಯಿಂದ ಪುತ್ರ ರಾಹುಲ್ ಗಾಂಧಿ ಅವರೊಂದಿಗೆ ಗೋವಾದ ಪಣಜಿಗೆ ಬಂದಿಳಿದಿದ್ದಾರೆ.
‘ಕಳೆದ ಆಗಸ್ಟ್‌ನಲ್ಲಿ ಸೋನಿಯಾ ಗಾಂಧಿಯವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಸೋನಿಯಾ, ನಿಯಮಿತವಾಗಿ ಔಷಧಗಳನ್ನು ಸೇವಿಸುತ್ತಿದ್ದರು. ಈಗ ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾದ ಕಾರಣ ಅವರ ಎದೆಯ ಸೋಂಕು ಸ್ಥಿರವಾಗಿತ್ತು. ಈ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದರು' ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್
ದೆಹಲಿಯಲ್ಲಿ ಉಂಟಾಗುತ್ತಿರುವ ವಾಯುಮಾಲಿನ್ಯ, ಸೋನಿಯಾ ಅವರಲ್ಲಿರುವ ಅಸ್ತಮಾ ಮತ್ತು ಎದೆಯ ಸೋಂಕಿನ ತೀವ್ರತೆ ಹೆಚ್ಚಿಸುವ ಸಾಧ್ಯತೆ ಇರುವುದರಿಂದ, ವೈದ್ಯರು ಅವರನ್ನು ದೆಹಲಿಯಿಂದ ಬೇರೆಡೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.