ADVERTISEMENT

ನ್ಯಾಷನಲ್ ಹೆರಾಲ್ಡ್ ಪ್ರಕರಣ: 2ನೇ ಸುತ್ತಿನ ಇ.ಡಿ ವಿಚಾರಣೆಗೆ ಹಾಜರಾದ ಸೋನಿಯಾ

ಪಿಟಿಐ
Published 26 ಜುಲೈ 2022, 6:31 IST
Last Updated 26 ಜುಲೈ 2022, 6:31 IST
   

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಜಾರಿ ನಿರ್ದೇಶನಾಲಯದ(ಇ.ಡಿ) ವಿಚಾರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಜರಾಗಿದ್ದಾರೆ.

ಬೆಳಿಗ್ಗೆ 11 ಗಂಟೆ ಸುಮಾರಿಗೆ ಕೇಂದ್ರ ದೆಹಲಿಯ ವಿದ್ಯುತ್ ಲೇನ್‌ನಲ್ಲಿರುವ ಇ.ಡಿ ಕಚೇರಿಗೆ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಜೊತೆ ಆಗಮಿಸಿದರು.

ಪ್ರಿಯಾಂಕಾ ಗಾಂಧಿಯವರು ಇ.ಡಿ ಕಚೇರಿಯಲ್ಲೇ ಉಳಿದಿದ್ದು, ರಾಹುಲ್ ಗಾಂಧಿ ವಾಪಸ್ ತೆರಳಿದ್ದಾರೆ.

ADVERTISEMENT

ಜುಲೈ 11 ರಂದು ನಡೆದ ಎರಡು ಗಂಟೆಗಳ ಮೊದಲ ಸುತ್ತಿನ ವಿಚಾರಣೆ ವೇಳೆ ಇ.ಡಿ ಅಧಿಕಾರಿಗಳು 28 ಪ್ರಶ್ನೆಗಳನ್ನು ಸೋನಿಯಾ ಮುಂದಿಟ್ಟಿದ್ದರು ಎಂದು ತಿಳಿದು ಬಂದಿದೆ.

ನ್ಯಾಶನಲ್ ಹೆರಾಲ್ಡ್ ಒಡೆತನ ಹೊಂದಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಹಣಕಾಸು ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ತಿಳಿದು ಬಂದಿದೆ.

ಗಾಂಧಿ ಕುಟುಂಬದ ವಿರುದ್ಧ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದು, ಪ್ರತಿಭಟನೆ ಮುಂದುವರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇ.ಡಿ ಕಚೇರಿಯಿಂದ ಸೋನಿಯಾ ಗಾಂಧಿಯವರ ನಿವಾಸದವರೆಗೂ ಸಿಆರ್‌ಪಿಎಫ್ ಮತ್ತು ಆರ್‌ಎಎಫ್ ಪಡೆಗಳನ್ನು ನಿಯೋಜಿಸಲಾಗಿದ್ದು, ಈ ಪ್ರದೇಶದಲ್ಲಿ ಸಂಚಾರ ನಿಷೇಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.