ADVERTISEMENT

ನ್ಯಾಷನಲ್ ಹೆರಾಲ್ಡ್‌ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜುಲೈ 2022, 7:00 IST
Last Updated 21 ಜುಲೈ 2022, 7:00 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ   

ನವದೆಹಲಿ: ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ದೆಹಲಿಯ ಜಾರಿ ನಿರ್ದೇಶನಾಲಯದ(ಇಡಿ) ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಮಧ್ಯಾಹ್ನ 12 ಗಂಟೆ ಸುಮಾರಿಗೆ ದೆಹಲಿಯ ಕೇಂದ್ರ ಭಾಗದಲ್ಲಿರುವ ಇ.ಡಿ ಪ್ರಧಾನ ಕಚೇರಿ ತಲುಪಿದ ಸೋನಿಯಾ ಗಾಂಧಿ ಅವರು ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.

ಮನೆಯಿಂದ ತೆರಳಿದ ಸೋನಿಯಾ ಅವರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ, ರಾಹುಲ್‌ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರು ಸಾಥ್ ನೀಡಿದರು.

ADVERTISEMENT

ದೆಹಲಿಯಲ್ಲಿ ಪ್ರತಿಭಟನೆ: ವ್ಯಾಪಕ ಭದ್ರತೆ
ಇನ್ನೊಂದೆಡೆ, ಸೋನಿಯಾ ಗಾಂಧಿ ಅವರನ್ನು ಇ.ಡಿ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಿದೆ.

‘ಒಂದೆಡೆ ಸಂಸತ್‌ನ ಅಧಿವೇಶನ ನಡೆಯುತ್ತಿದೆ. ವಿವಿಧೆಡೆ ಕಾಂಗ್ರೆಸ್‌ ಪಕ್ಷವು ಪ್ರತಿಭಟನೆ ನಡೆಸಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗಲಿದ್ದು, ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗಿದೆ. ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಕಾಂಗ್ರೆಸ್‌ ಕಚೇರಿ ಬಳಿಯ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ’ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.