ADVERTISEMENT

ಕೋವಿಡ್‌ ನಂತರದ ಸಮಸ್ಯೆಗಳ ಕಾರಣಕ್ಕಾಗಿ ಸೋನಿಯಾ ಆಸ್ಪತ್ರೆಗೆ ದಾಖಲು

ಪಿಟಿಐ
Published 12 ಜೂನ್ 2022, 9:34 IST
Last Updated 12 ಜೂನ್ 2022, 9:34 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ    

ನವದೆಹಲಿ: ಕೋವಿಡ್‌ ನಂತರದ ಸಮಸ್ಯೆಗಳ ಕಾರಣದಿಂದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾನುವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಸೋನಿಯಾ ಅವರ ಆರೋಗ್ಯ ಸ್ಥಿರವಾಗಿದ್ದು, ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಲಿದ್ದಾರೆ. ಆವರ ಆರೋಗ್ಯದ ಮೇಲೆ ನಿಗಾ ವಹಿಸಲಾಗುತ್ತದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

ಸೋನಿಯಾ ಗಾಂಧಿ ಅವರು ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು.

ADVERTISEMENT

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷರಿಗೆ ಹೊಸ ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ ಜೂನ್ 8 ರಂದು ಅವರ ಹಾಜರಿಗೆ ಸೂಚಿಸಲಾಗಿತ್ತು. ಆದರೆ ಕೋವಿಡ್‌ 19 ಸೋಂಕಿಗೆ ಒಳಗಾಗಿದ್ದರಿಂದ, ಹಾಜರಾತಿಗೆ ಮತ್ತೊಂದು ದಿನ ನಿಗದಿ ಮಾಡುವಂತೆ ತನಿಖಾ ಸಂಸ್ಥೆಯನ್ನು ಅವರು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.