ADVERTISEMENT

ಪೌರತ್ವ ಪಡೆಯುವ ಮುನ್ನ ಮತದಾರರ ಪಟ್ಟಿಯಲ್ಲಿ ಹೆಸರು: ಸೋನಿಯಾ ವಿರುದ್ಧದ ಅರ್ಜಿ ವಜಾ

ಪಿಟಿಐ
Published 11 ಸೆಪ್ಟೆಂಬರ್ 2025, 14:29 IST
Last Updated 11 ಸೆಪ್ಟೆಂಬರ್ 2025, 14:29 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ   

ನವದೆಹಲಿ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತದ ಪೌರತ್ವ (1983) ಪಡೆಯುವುದಕ್ಕೂ ಮೂರು ವರ್ಷಗಳ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡಿದ್ದರು ಎಂದು ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.

ಪೌರತ್ವದ ವಿಷಯವು ಕೇಂದ್ರ ಸರ್ಕಾರದ ವಿಶೇಷ, ಸಾಂವಿಧಾನಿಕ ಮತ್ತು ಶಾಸನಬದ್ಧ ಅಧಿಕಾರ ವ್ಯಾಪ್ತಿಗೆ ಬರುತ್ತದೆ. ಇದರಲ್ಲಿ ಅನಗತ್ಯವಾಗಿ ನ್ಯಾಯಾಲಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ ಹೆಚ್ಚುವರಿ ಮುಖ್ಯ ಜುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ ವೈಭವ್‌ ಚೌರಾಸಿಯಾ ಅರ್ಜಿಯನ್ನು ವಜಾಗೊಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT