ADVERTISEMENT

ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಪುನರಾಯ್ಕೆ

ಪಿಟಿಐ
Published 1 ಜೂನ್ 2019, 9:16 IST
Last Updated 1 ಜೂನ್ 2019, 9:16 IST
   

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾಗಾಂಧಿ ಶನಿವಾರ ಪುನರಾಯ್ಕೆಯಾಗಿದ್ದಾರೆ. ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಯ್ಕೆಯಾಗಿರುವ ಸಂಸತ್ ಸದಸ್ಯರ ಸಭೆಯಲ್ಲಿ ಸೋನಿಯಾ ಆಯ್ಕೆಯನ್ನು ಪ್ರಕಟಿಸಲಾಯಿತು.

ಪಕ್ಷದಿಂದ ಲೋಕಸಭೆಗೆ ಆಯ್ಕೆಯಾಗಿರುವ ಎಲ್ಲ 52 ಸದಸ್ಯರು ಮತ್ತು ರಾಜ್ಯಸಭೆ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಸೋನಿಯಾ ಗಾಂಧಿ ಯುಪಿಎ ಮೈತ್ರಿಕೂಟದ ಮುಖ್ಯಸ್ಥರೂ ಹೌದು.

ಸಂಸದೀಯ ಪಕ್ಷದ ನಾಯಕರಾಗಿ ಸೋನಿಯಾ ಗಾಂಧಿ ಆಯ್ಕೆ ಘೋಷಣೆಯನ್ನು ಟ್ವಿಟರ್ ಮೂಲಕ ಘೋಷಿಸಿದ ಕಾಂಗ್ರೆಸ್‌ ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲಾ, ‘ಕಾಂಗ್ರೆಸ್‌ಗೆ ಮತ ನೀಡಿದ ದೇಶದ 12.13 ಕೋಟಿ ಮತದಾರರಿಗೆ ಧನ್ಯವಾದಗಳು’ ಎನ್ನುವಸೋನಿಯಾ ಗಾಂಧಿ ಭಾಷಣವನ್ನು ಉಲ್ಲೇಖಿಸಿದ್ದಾರೆ.

ADVERTISEMENT

ಲೋಕಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಪದ್ಧತಿಯನ್ನು ನಿರೂಪಿಸಲು ಸಂಸದೀಯ ನಾಯಕನನ್ನು ಆರಿಸಬೇಕಿದೆ. ಮೇ 25ರ ನಂತರ ಪಕ್ಷದ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಭಾಗವಹಿಸಿದ ಪಕ್ಷದ ಮೊದಲ ಅಧಿಕೃತ ಕಾರ್ಯಕಾರಿ ಸಮೀತಿ ಸಭೆ ಇದು.

ಮೇ 25ರಂದು ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷಸ್ಥಾನ ತೊರೆಯುವ ನಿರ್ಧಾರ ಪ್ರಕಟಿಸಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಈ ಪ್ರಸ್ತಾವ ತಿರಸ್ಕರಿಸಿತ್ತು. ಮಾತ್ರವಲ್ಲದೆ ಪಕ್ಷದ ಸಂಘಟನೆಯಲ್ಲಿ ಅಗತ್ಯ ಬದಲಾವಣೆ ಮಾಡಲು ರಾಹುಲ್ ಅವರಿಗೆ ಅಧಿಕಾರ ನೀಡಲು ಸರ್ವಾನುಮತದ ನಿರ್ಣಯ ಅಂಗೀಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.