ADVERTISEMENT

ಕೇಂದ್ರದ ವಿರುದ್ಧ ಪ್ರತಿಭಟನೆ: ಕಾರ್ಯತಂತ್ರ ರೂಪಿಸಲು 24ರಂದು ಕಾಂಗ್ರೆಸ್ ಸಭೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 11:33 IST
Last Updated 21 ಜೂನ್ 2021, 11:33 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ   

ನವದೆಹಲಿ (ಪಿಟಿಐ): ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಹಾಗೂ ಇನ್ನಿತರ ಪ್ರಮುಖ ವಿಷಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಸಂಬಂಧ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಇದೇ 24ರಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳ ಸಭೆ ಕರೆದಿದ್ದಾರೆ.

ಜುಲೈನಲ್ಲಿ ಪ್ರಾರಂಭವಾಗಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಈ ಸಭೆ ಕರೆಯಲಾಗಿದೆ.

ಈ ವರ್ಚ್ಯುವಲ್ ಸಭೆಯಲ್ಲಿ ಪಕ್ಷದ ನಾಯಕರು ಸದ್ಯದ ಕೋವಿಡ್ ಸಾಂಕ್ರಾಮಿಕ ಮತ್ತು ರಾಜಕೀಯ ಪರಿಸ್ಥಿತಿಯ ಬಗ್ಗೆಯೂ ಚರ್ಚಿಸಲಿದ್ದಾರೆ. ಅಲ್ಲದೆ, ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆಯೂ ಚರ್ಚೆ ನಡೆಯಲಿದೆ. ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿದು, ಜನರ ಬಳಿಗೆ ಹೋಗಲು ನಾಯಕರು ತಮ್ಮ ಸಲಹೆಗಳನ್ನು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಇಂಧನ ಬೆಲೆ ಏರಿಕೆಯಲ್ಲದೆ, ಹಣದುಬ್ಬರ ಏರಿಕೆ, ಕೋವಿಡ್ ಲಸಿಕಾ ಅಭಿಯಾನ ಮತ್ತು ಕೋವಿಡ್‌ ಸಾಂಕ್ರಾಮಿಕ ರೋಗ ನಿಭಾಯಿಸುವಲ್ಲಿ ಸರ್ಕಾರದ ವೈಫಲ್ಯದ ಬಗ್ಗೆ ಪ್ರತಿಭಟನೆ ನಡೆಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.