ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಸೋಮವಾರ ತಿಳಿಸಲಾಗಿದೆ.
ಸೋನಿಯಾ ಅವರು ಭಾನುವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು.
ಆಸ್ಪತ್ರೆ ಮುಖ್ಯಸ್ಥ ಡಾ.ಅಜಯ್ ಸ್ವರೂಪ್ ಅವರು, ‘ವೈದ್ಯರು ಸೋನಿಯಾ ಗಾಂಧಿ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.