
ಪ್ರಜಾವಾಣಿ ವಾರ್ತೆ
ನವದೆಹಲಿ: ಅಸ್ತಮಾ ಕಾಯಿಲೆಗೆ ಚಿಕಿತ್ಸೆ ಪಡೆಯಲು ಇಲ್ಲಿನ ಶ್ರೀ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಭಾನುವಾರ ಮನೆಗೆ ತೆರಳಿದ್ದಾರೆ.
ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಅವರು ಚಿಕಿತ್ಸೆಗೆ ಸ್ಪಂದಿಸಿದರು. ಅವರು ಉತ್ತಮ ಚೇತರಿಕೆ ಕಂಡಿದ್ದಾರೆ. ಮನೆಯಲ್ಲೇ ಮುಂದಿನ ಚಿಕಿತ್ಸೆ ಮುಂದುವರಿಸಲು ಸಲಹೆ ನೀಡಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದರು.
ಎದೆಗೆ ಸೋಂಕು ತಗುಲಿ ಅಸ್ತಮಾ ಉಲ್ಬಣಗೊಂಡಿದೆ ಎಂದು ಚಿಕಿತ್ಸೆ ನೀಡಿದ ವೈದ್ಯರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.