ಸೋನಿಯಾ ಗಾಂಧಿ
ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಜೂನ್ 15ರಂದು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಸೋನಿಯಾ ಅವರನ್ನು ಡಿಸ್ಚಾರ್ಜ್ ಮಾಡಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದೆ.
‘ಕಿಬ್ಬೊಟ್ಟೆಯ ಸೋಂಕಿನಿಂದಾಗಿ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಅದಾಗ್ಯೂ ಚಿಕಿತ್ಸೆ ಮುಂದುವರಿಯಲಿದೆ’ ಎಂದು ಆಸ್ಪತ್ರೆ ಮುಖ್ಯಸ್ಥ ಡಾ. ಅಜಯ್ ಸ್ವರೂಪ್ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.