ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಷ್ಟ್ರ ರಾಜಧಾನಿಯಲ್ಲಿರುವ ಸರ್ ಗಂಗಾರಾಮ್ ಆಸ್ಪತ್ರೆಗೆ (SGRH) ಸೋಮವಾರ ಭೇಟಿ ನೀಡಿ ವೈದ್ಯಕೀಯ ತಪಾಸಣೆಗೆ ಒಳಗಾದರು.
ಹಿಮಾಚಲ ಪ್ರದೇಶಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸಿದ್ದರು. ಶಿಮ್ಲಾದಲ್ಲಿರುವ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿ ಆರೋಗ್ಯ ತಪಾಸಣೆಗೆ ಒಳಪಟ್ಟಿದ್ದರು.
‘ಸೋನಿಯಾ ಗಾಂಧಿ (78) ಅವರ ರಕ್ತದೊತ್ತಡ ಹೆಚ್ಚಾಗಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಸಾಮಾನ್ಯವಾಗಿದೆ’ ಎಂದು ಕಾಲೇಜಿನ ಉಪ ಸೂಪರಿಂಟೆಂಡೆಂಟ್ ಡಾ. ಅಮನ್ ಶನಿವಾರ ಹೇಳಿದ್ದರು.
ಇದರ ಬೆನ್ನಲ್ಲೇ ಗಂಗಾರಾಮ್ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ಸೋನಿಯಾ, ಹಲವು ತಪಾಸಣೆಗೆ ಒಳಪಟ್ಟರು ಎಂದು ಮೂಲಗಳು ಹೇಳಿವೆ.
ಕಳೆದ ಫೆಬ್ರುವರಿಯಲ್ಲೂ ಸೋನಿಯಾ ಗಾಂಧಿ ಅವರು ಗಂಗಾರಾಮ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.