ADVERTISEMENT

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಸೋನಿಯಾ ಗಾಂಧಿ; ಆಹಾರದ ಮೇಲೆ ನಿಗಾ: ವೈದ್ಯರು

ಪಿಟಿಐ
Published 17 ಜೂನ್ 2025, 9:13 IST
Last Updated 17 ಜೂನ್ 2025, 9:13 IST
<div class="paragraphs"><p>ಸೋನಿಯಾ ಗಾಂಧಿ</p></div>

ಸೋನಿಯಾ ಗಾಂಧಿ

   

ನವದೆಹಲಿ: ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ, ಆದರೆ ಅವರನ್ನು ಯಾವಾಗ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಬಹುದು ಎನ್ನುವುದನ್ನು ನಿರ್ಧರಿಸಿಲ್ಲ ಎಂದು ಆಸ್ಪತ್ರೆಯ ಅಧಿಕೃತ ಹೇಳಿಕೆಯಲ್ಲಿ ಮಂಗಳವಾರ ತಿಳಿಸಲಾಗಿದೆ.

ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಭಾನುವಾರ ಸಂಜೆ ದೆಹಲಿಯ ಸರ್ ಗಂಗಾರಾಮ್‌ ಆಸ್ಪತ್ರೆಗೆ ಸೋನಿಯಾ ಅವರು ದಾಖಲಾಗಿದ್ದರು.

ADVERTISEMENT

ಆಸ್ಪತ್ರೆ ಮುಖ್ಯಸ್ಥ ಡಾ.ಅಜಯ್‌ ಸ್ವರೂಪ್‌ ಅವರು ಪ್ರಕಟಣೆಯಲ್ಲಿ ‘ಸೋನಿಯಾ ಅವರ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಉದರದ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆಹಾರ ಕ್ರಮ ಹಾಗೂ ಆರೋಗ್ಯದ ಬಗ್ಗೆ ನಮ್ಮ ವೈದ್ಯರ ತಂಡ ಗಮನಿಸುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಅವರ ಡಿಸ್ಚಾರ್ಜ್ ದಿನಾಂಕವನ್ನು ಇನ್ನೂ ನಿರ್ಧರಿಸಲಾಗಿಲ್ಲ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.