ADVERTISEMENT

ಸೋನಿಯಾ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ

ಪಿಟಿಐ
Published 18 ಜೂನ್ 2019, 18:53 IST
Last Updated 18 ಜೂನ್ 2019, 18:53 IST
   

ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಕರೆದಿರುವ ಸಭೆಯಲ್ಲಿ ಪಕ್ಷದ ಕಾರ್ಯತಂತ್ರ ಏನಾಗಿರಬೇಕು ಎಂಬುದರ ಕುರಿತು ಕಾಂಗ್ರೆಸ್‌ನ ಪ್ರಮುಖ ನಾಯಕರು ಮಂಗಳವಾರ ಚರ್ಚಿಸಿದರು.

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ, ಮನಮೋಹನ್ ಸಿಂಗ್, ಎ.ಕೆ. ಆ್ಯಂಟನಿ, ಗುಲಾಂನಬಿ ಆಜಾದ್, ಆನಂದ್ ಶರ್ಮಾ, ಜೈರಾಮ್ ರಮೇಶ್, ಕೆ. ಸುರೇಶ್, ಅಧೀರ್ ರಂಜನ್ ಚೌಧರಿ ಉಪಸ್ಥಿತರಿದ್ದರು.

ಚುನಾವಣಾ ಸುಧಾರಣೆ, 2022ಕ್ಕೆ ಭಾರತ ಸ್ವಾತಂತ್ರ್ಯದ 75ನೇ ವರ್ಷಾಚರಣೆ, ಮಹಾತ್ಮಾ ಗಾಂಧಿ ಅವರು 150ನೇ ಜನ್ಮದಿನಾಚರಣೆ ವಿಷಯಗಳ ಕುರಿತು ಚರ್ಚಿಸಲು ಪ್ರಧಾನಿ ಸಭೆ ಕರೆದಿದ್ದಾರೆ. ಜೂನ್ 20ರಂದು ಎಲ್ಲ ಸಂಸದರಿಗೆ ಔತಣಕೂಟ ಏರ್ಪಡಿಸಲಾಗಿದೆ.

ADVERTISEMENT

ಸೋನಿಯಾ ಗಾಂಧಿ ನೇತೃತ್ವದಲ್ಲಿ ಯುಪಿಎ ಸಭೆ ನಡೆಸಿ, ಇದೇ ವಿಚಾರವಾಗಿ ಚರ್ಚಿಸಲಾಯಿತು. ಮೋದಿ ನೇತೃತ್ವದ ಸಭೆಯಲ್ಲಿ ಭಾಗಿಯಾಗಬೇಕೆ, ಬೇಡವೇ ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿಲ್ಲ. ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸೋನಿಯಾ ಗಾಂಧಿ, ‘ಈ ವಿಚಾರ ನಿಮಗೆ ಬುಧವಾರ ತಿಳಿಯಲಿದೆ’ ಎಂದರು.

ಸಭೆಗೆ ಬರುವುದಿಲ್ಲ–ಮಮತಾ: ಮೋದಿ ಕರೆದಿರುವ ಸರ್ವಪಕ್ಷಗಳ ಮುಖ್ಯಸ್ಥರ ಸಭೆಗೆ ಹಾಜರಾಗದಿರಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.