ADVERTISEMENT

ಹೊಟ್ಟೆ ನೋವು: ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಪಿಟಿಐ
Published 15 ಜೂನ್ 2025, 20:27 IST
Last Updated 15 ಜೂನ್ 2025, 20:27 IST
<div class="paragraphs"><p> ಸೋನಿಯಾ</p></div>

ಸೋನಿಯಾ

   

ನವದೆಹಲಿ: ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾನುವಾರ ದೆಹಲಿಯ ಸರ್ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾದರು. 

‘ಸೋನಿಯಾ ಗಾಂಧಿ ಅವರು ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಆಸ್ಪತ್ರೆಗೆ ಬಂದು ತಪಾಸಣೆಗೆ ಒಳಗಾದರು. ಅವರನ್ನು ಗ್ಯಾಸ್ಟ್ರೋಎಂಟರಾಲಜಿ ವಿಭಾಗದಲ್ಲಿ ದಾಖಲು ಮಾಡಿಕೊಳ್ಳಲಾಯಿತು. ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರ ತಂಡವೊಂದು ಅವರ ಆರೋಗ್ಯದ ಮೇಲೆ ನಿಗಾ ವಹಿಸುತ್ತಿದೆ’ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

ADVERTISEMENT

ಜೂನ್‌ 9ರಂದು ಸೋನಿಯಾ ಗಾಂಧಿ ಅವರು ಸರ್ ಗಂಗಾ ರಾಮ್‌ ಆಸ್ಪತ್ರೆಗೆ ತೆರಳಿ ಚಿಕಿತ್ಸೆಗೆ ದಾಖಲಾಗಿದ್ದರು. ಜೂನ್‌ 7ರಂದು  ಶಿಮ್ಲಾದಲ್ಲಿದ್ದಾಗ ಅವರಿಗೆ ಅಧಿಕ ರಕ್ತದೊತ್ತಡ ಕಾಣಿಸಿಕೊಂಡು ಅಲ್ಲಿನ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.