ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್‌ಐಆರ್) ವಿರೋಧಿಸಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ‘ಇಂಡಿಯಾ’ ಒಕ್ಕೂಟದ ಹಲವು ಸಂಸದರು ಸಂಸತ್‌ನಲ್ಲಿ ಬುಧವಾರವೂ ಪ್ರತಿಭಟನೆ ನಡೆಸಿದರು.
ಪ್ರಿಯಾಂಕಾ ಗಾಂಧಿ ಮತ್ತು ವಿರೋಧ ಪಕ್ಷಗಳ ಇತರ ಸಂಸದರು ಎಸ್‌ಐಆರ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸಂಸತ್ತಿನ ಮಕರ ದ್ವಾರದ ಸಮೀಪ ‘ಎಸ್‌ಐಆರ್–ಪ್ರಜಾಪ್ರಭುತ್ವ ವಿರೋಧಿ’ ಘೋಷಣೆಯ ದೊಡ್ಡ ಬ್ಯಾನರ್ ಹಿಡಿದು ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಸ್‌ಪಿ, ಆರ್‌ಜೆಡಿ ಸಂಸದರು ‘ಎಸ್‌ಐಆರ್ ನಿಲ್ಲಿಸಿ’ ಫಲಕಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ಎಸ್‌ಐಆರ್: ಮಾಜಿ ಅಧಿಕಾರಿಗಳಿಂದ ಕಳವಳ
ಬಿಹಾರದಲ್ಲಿ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಬಗ್ಗೆ ಸುಮಾರು 90 ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿ. ಪೌರತ್ವ ಸಾಬೀತುಪಡಿಸಲು ದಾಖಲೆ ಇರದವರು ಸೇರಿದಂತೆ ಸಾಕಷ್ಟು ಜನರು ಮತದಾನದ ಹಕ್ಕನ್ನು ಕಳೆದುಕೊಳ್ಳದ್ದಾರೆ ಎಂದು ಹೇಳಿದ್ದಾರೆ.
ಅಖಿಲ ಭಾರತ ಮತ್ತು ಹಲವು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಲ್ಲಿ ಸೇವೆ ಸಲ್ಲಿಸಿರುವ 93 ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದು ಬಿಹಾರ ಮತ್ತು ದೇಶದಾದ್ಯಂತ ಎಸ್‌ಐಆರ್ ನಡೆಸುವುದರಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಅತಿ ದೊಡ್ಡ ಅಪಾಯ ಎದುರಾಗಲಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.