ADVERTISEMENT

ರಾಜಧರ್ಮದ ಬಗ್ಗೆ ಪಾಠ ಮಾಡಬೇಡಿ: ಸೋನಿಯಾ ವಿರುದ್ದ ಗುಡುಗಿದ ರವಿಶಂಕರ್‌ ಪ್ರಸಾದ್‌

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2020, 10:38 IST
Last Updated 28 ಫೆಬ್ರುವರಿ 2020, 10:38 IST
ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌
ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌   

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರಕ್ಕೆ ರಾಜಧರ್ಮದ ಬಗ್ಗೆ ಪಾಠ ಮಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಗುರುವಾರ ಹರಿಹಾಯ್ದಿದ್ದ ಸೋನಿಯಾ ಗಾಂಧಿ, ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜಧರ್ಮ ಪಾಲಿಸಬೇಕು. ಗೃಹ ಸಚಿವ ಅಮಿತ್‌ ಶಾ ತಕ್ಷಣವೇ ರಾಜೀನಾಮೆ ನೀಡಬೇಕು' ಎಂದುಒತ್ತಾಯಿಸಿದ್ದರು.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ರವಿಶಂಕರ ಪ್ರಸಾದ್‌, ‘ಶ್ರೀಮತಿ ಸೋನಿಯಾ ಗಾಂಧಿ ಅವರೇ, ನೀವು ನಮಗೆ ರಾಜಧರ್ಮದ ಬಗ್ಗೆ ಉಪದೇಶ ನೀಡಲು ಬರಬೇಡಿ’ಎಂದಿದ್ದಾರೆ.

ADVERTISEMENT

ಇದೇ ವೇಳೆ ಬಿಜೆಪಿ ಮುಖಂಡ ಕಪಿಲ್‌ ಮಿಶ್ರಾ ಅವರ ದ್ವೇಷಪೂರಿತ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕಪಿಲ್‌ ಮಿಶ್ರಾ ಆಡಿದ ಮಾತುಗಳನ್ನು ನಮ್ಮ ಪಕ್ಷ ಎಂದಿಗೂ ಮನ್ನಿಸುವುದಿಲ್ಲ. ಮಿಶ್ರಾ ಮಾತುಗಳನ್ನು ನಮ್ಮ ಪಕ್ಷದ ಹಿರಿಯ ನಾಯಕರೇ ಸಾರ್ವಜನಿಕವಾಗಿ ಖಂಡಿಸಿದ್ದಾರೆ‘ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.