ADVERTISEMENT

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ದೃಢ

ಪಿಟಿಐ
Published 13 ಆಗಸ್ಟ್ 2022, 8:03 IST
Last Updated 13 ಆಗಸ್ಟ್ 2022, 8:03 IST
   

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ದೃಢಪಟ್ಟಿದೆ. ಹಾಗಾಗಿ, ಅವರು ಪ್ರತ್ಯೇಕವಾಸದಲ್ಲಿದ್ದಾರೆ.

ಇತ್ತೀಚೆಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಕೋವಿಡ್ ದೃಢಪಟ್ಟಿತ್ತು.

‘ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೋವಿಡ್ ದೃಢಪಟ್ಟಿದೆ. ಸರ್ಕಾರದ ಕೋವಿಡ್ ಮಾರ್ಗಸೂಚಿಗಳ ಅನ್ವಯ ಅವರು, ಪ್ರತ್ಯೇಕವಾಸದಲ್ಲಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ADVERTISEMENT

ಜೂನ್ ತಿಂಗಳಲ್ಲೂ ಸಹ ಸೋನಿಯಾ ಗಾಂಧಿಯವರಿಗೆ ಕೋವಿಡ್ ದೃಢಪಟ್ಟಿತ್ತು.

ಬಳಿಕ, 75 ವರ್ಷದ ಕಾಂಗ್ರೆಸ್ ನಾಯಕಿ, ಜೂನ್ 12ರಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಜೂನ್ 20ಕ್ಕೆ ಬಿಡುಗಡೆಯಾಗಿದ್ದರು.

ಕಳೆದ ತಿಂಗಳು, ನ್ಯಾಷನಲ್ ಹೆರಾಲ್ಡ್ ಹಾಗೂ ಇತರೆ ಸಂಸ್ಥೆಗಳ ಮಧ್ಯೆ ನಡೆದಿರುವ ವ್ಯವಹಾರ ಹಾಗೂ ಹಣ ಅಕ್ರಮ ವರ್ಗಾವಣೆಯ ತನಿಖೆಯ ಭಾಗವಾಗಿ ಸೋನಿಯಾ ಗಾಂಧಿ ಅವರನ್ನು ಜಾರಿ ನರ್ದೇಶನಾಲಯದ(ಇ.ಡಿ) ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

ಪ್ರಕರಣದಲ್ಲಿ ಹೆಚ್ಚುವರಿ ಸಾಕ್ಷ್ಯಗಳನ್ನು ಸಂಗ್ರಹಿಸಲು ನ್ಯಾಷನಲ್ ಹೆರಾಲ್ಡ್ ಕಚೇರಿ ಸೇರಿ ದೇಶದ ವಿವಿಧೆಡೆ ದಾಳಿ ಸಹ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.